ಸಂಪುಟ ವಿಸ್ತರಣೆ ಬಗ್ಗೆ ಕೇಳ್ಬೇಡಿ, ನನ್ನ ಮಂತ್ರಿಸ್ಥಾನ ಹೋಗುತ್ತೆ: ಸೋಮಶೇಖರ್ ( st somashekhar )
ಮೈಸೂರು : ಉಪಚುನಾವಣೆ ಬಳಿಕ ಸಂಪುಟ ವಿಸ್ತರಣೆ ಆಗುತ್ತೆ ಎಂಬ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ( st somashekhar ) ಪ್ರತಿಕ್ರಿಯಿಸಿ, ಮಂತ್ರಿಮಂಡಲ ವಿಸ್ತರಣೆಯ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಿಬೇಡಿ.
ಅದಕ್ಕೆ ನಾನು ಉತ್ತರ ಕೊಟ್ಟರೆ ಇರುವ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಪತ್ರಕರ್ತರ `ಮಂತ್ರಿಮಂಡಲ ವಿಸ್ತರಣೆ ಬಗ್ಗೆ’ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆ ವಿಚಾರವಾಗಿ ಮಾತನಾಡೋಕೆ ನನಗೆ ಅಧಿಕಾರ ಇಲ್ಲ.
ನನಗೆ ಮಾಧ್ಯಮದವರು ಅಧಿಕಾರ ಕೊಡಿಸಿದರೆ ಮಾತನಾಡಬಹುದು. ನನಗೆ ಎಷ್ಟು ಅಧಿಕಾರ ಇದೆ ಅಷ್ಟಕ್ಕೆ ಮಾತ್ರ ಉತ್ತರಿಸುತ್ತೇನೆ.
ಪದೇ ಪದೆ ಈ ಬಗ್ಗೆ ಪ್ರಶ್ನೆ ಕೇಳಿಬೇಡಿ. ಅದಕ್ಕೆ ನಾನು ಉತ್ತರ ಕೊಟ್ಟರೆ ಇರೋ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಇದನ್ನೂ ಓದಿ : ಇಂದಿನಿಂದ ಸಿಎಂ ಬಿಎಸ್ ವೈ ಮಂಗಳೂರು ಪ್ರವಾಸ
ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿ, ಶಿರಾ ಹಾಗೂ ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರ್ ಆರ್ ನಗರದಲ್ಲಿ ಮುನಿರತ್ನ ಗೆಲ್ತಾರೆ. ಮುಂಚೆ ಒಂದು ಜಮಾನ ಇತ್ತು. ಕಡಿಮೆ ಮತದಾನವಾದರೆ ಇನ್ನೊಂದು ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಎನ್ನಲಾಗುತ್ತಿತ್ತು.
ಆದರೆ ಕೊರೊನಾ ನಡುವೆ ಆರ್.ಆರ್ ನಗರದಲ್ಲಿ ಉತ್ತಮ ಮತ ಚಲಾವಣೆ ಆಗಿದೆ. ಕಾಂಗ್ರೆಸ್ ಇಲ್ಲದ ಕಾರಣಗಳನ್ನು ಹುಡುಕುತ್ತಿದೆ.
ಆ ಪಕ್ಷಕ್ಕೆ ಸೋಲುವ ಅರಿವಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸೋಲು ಒಪ್ಪಿಕೊಂಡಿದ್ದಾರೆ. ಇವಿಎಂ ಮೇಲೆ ಅವರು ಮಾಡಿರೋ ಆರೋಪ ಸೋಲು ಮತ್ತು ಹತಾಶೆಯ ಸಂಕೇತ.
ರಾಜ್ಯದಲ್ಲಿ ಮೂರನೇ ಹಂತದ `ಆಪರೇಷನ್ ಕಮಲ’
ಫಲಿತಾಂಶ ಬಂದ ಮೇಲೆ ಕಾರಣ ಕೊಡುವುದಕ್ಕಿಂತ, ಟಿ.ಬಿ.ಜಯಚಂದ್ರ ಮುಂಚೆಯೇ ಕಾರಣ ಹುಡುಕಿಕೊಂಡಿದ್ದಾರೆ ಎಂದು ಇವಿಎಂ ಬಗ್ಗೆ ಕಾಂಗ್ರೆಸ್ ನಾಯಕರು ಮಾಡಿದ ಆರೋಪಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel