ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ಯುವಕನಿಗೆ ಚಾಕು ಇರಿದಿರಬಹುದು ಎನ್ನಲಾಗಿದೆ. ಈ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಚಿಕ್ಕನ್ ಸಾಲ್ನ ಅಂಚೆ ಕಚೇರಿ ಹತ್ತಿರ ನಡೆದಿದೆ.
ಘಟನೆಯಲ್ಲಿ ರಾಘವೇಂದ್ರ ಎಂಬ ಯುವಕ ಗಾಯಗೊಂಡಿದ್ದು, ಕಾಲು, ಹೃದಯ ಭಾಗಕ್ಕೆ ಗಾಯಗಳಾಗಿವೆ. ಗಾಯಾಳು ರಾಘವೇಂದ್ರಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬೆಳ್ಳಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.