ಮುಂಬೈ: ನಗರದ ಬಾಂದ್ರಾ ರೈಲು ನಿಲ್ದಾಣದಲ್ಲಿ (Bandra Railway Station In Mumbai) ಕಾಲ್ತುಳಿತ (Stampede) ಉಂಟಾದ ಹಿನ್ನೆಲೆಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್‌ಪುರಕ್ಕೆ (Gorakhpur, Uttar Pradesh) ತೆರಳುತ್ತಿದ್ದ ರೈಲು ಹತ್ತುವುದಕ್ಕಾಗಿ ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಗಿತ್ತು. ಗಾಯಗೊಂಡವರ ಪೈಕಿ 7 ಜನರ ಆರೋಗ್ಯ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಲು ರೈಲು ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿ ಈ ದುರ್ಘಟನೆ ಸಂಭವಿಸುವಂತಾಗಿದೆ ಎಂದು ತಿಳಿದು ಬಂದಿದೆ. ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಊರಿಗೆ ಹೋಗಲು ಆಗಮಿಸಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ.
ಗಾಯಗೊಂಡವರನ್ನು ರೈಲ್ವೇ ಪೊಲೀಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಸ್ಟ್ರೆಚರ್‌ಗಳಲ್ಲಿ ಎತ್ತಿಕೊಂಡು ಸಾಗಿಸಿದ್ದಾರೆ. ಸದ್ಯ ಪರಸ್ಥಿತಿ ನಿಯಂತ್ರಣದಲ್ಲಿದೆ ಎಂದು ರೈಲ್ವೆ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.








