#standwithhamsalekhasir ಎಂದ ಬೆಂಗಳೂರು ವಿವಿ ವಿದ್ಯಾರ್ಥಿಗಳು

1 min read
#standwithhamsalekhasir

#standwithhamsalekhasir ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಹಂಸಲೇಖ ಅವರು ಮೈಸೂರಿನಲ್ಲಿ ಮಾತಾಡಿದ ಭಾಷಣಕ್ಕೆ ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಹಂಸಲೇಖ ಅವರ ವಿರುದ್ಧ ದಾಖಲಾಗಿರುವ ದೂರು ರದ್ದು ಮತ್ತು ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿರುವವ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

#standwithhamsalekhasir

ಜೊತೆಗೆ ಹಂಸಲೇಖಾ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕುಲಪತಿ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಕ್ಯಾಂಪಸ್ ನ ಗ್ರಂಥಾಲಯದಿಂದ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಹೆಡ್ ಆಫೀಸ್ ತಲುಪಿತು.

ಅಲ್ಲಿ ವಿವಿಯ ಕುಲಪತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd