ಸ್ಟಾರ್ ನಿರ್ದೇಶಕ ಶಂಕರ್ ಅವರ ತಾಯಿ ನಿಧನ
ತಮಿಳಿನ ಸ್ಟಾರ್ ನಿರ್ದೇಶಕರಾದ ಶಂಕರ್ ಅವರ ತಾಯಿ ವಯೋಸಹಜ ಕಾಯಿಲೆಯಿಂದಾಗಿ ನಿಧನಹೊಂದಿದ್ದಾರೆ. 88 ವರ್ಷದ ಎಸ್ ಮುತ್ತುಲಕ್ಷ್ಮಿ ಅವರು ವಿಧಿವಶರಾಗಿದ್ದಾರೆ. ಶಂಕರ್ ಅವರ ತಾಯಿಯ ನಿಧನಕ್ಕೆ ಸಿನಿಮಾರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ.
ಶಂಕರ್ ಅವರು ಇಂಡಿಯನ್ , ಅನಿಯನ್ ನಂತಹ ಹಿಟ್ ಸಿನಿಮಾಗಳನ್ನ ನೀಡಿದ್ದಾರೆ.. ಸದ್ಯ ಟಾಲಿವುಡ್ ನ ಸ್ಟಾರ್ ನಟ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಜೊತೆ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ್ದಾರೆ. ಇದಾದ ನಂತರ ರಣ್ವೀರ್ ಸಿಂಗ್ ಜೊತೆ ಹಿಂದಿಯಲ್ಲಿ ಅನ್ನಿಯನ್ ರಿಮೇಕ್ ಗೂ ಆಕ್ಷನ್ ಕಟ್ ಹೇಳಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.