ಗೆಲುವಿನೊಂದಿಗೆ ಆರಂಭ.. ಗೆಲುವಿನೊಂದಿಗೆ ಅಂತ್ಯ | ಟೀಂ ಇಂಡಿಯಾ ಸೂಪರ್ Team India saaksha tv
ಟೀಂ ಇಂಡಿಯಾ ಈ ವರ್ಷ ಟೆಸ್ಟ್ ಕ್ರಿಕೆಟ್ ಅನ್ನು ಗೆಲುವಿನೊಂದಿಗೆ ಆರಂಭಿಸಿ.. ಗೆಲುವಿನೊಂದಿಗೆ ಮುಗಿಸಿದೆ. ಕಿಂಗ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಈ ವರ್ಷ 14 ಟೆಸ್ಟ್ ಪಂದ್ಯಗಳನ್ನಾಡಿದ್ದು, ಎಂಟು ಪಂದ್ಯ ಗಳನ್ನು ಗೆದ್ದಿದೆ. ಮೂರು ಪಂದ್ಯಗಳಲ್ಲಿ ಸೋಲುಂಡಿದೆ. ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.
ಮೂರು ಸೋಲುಗಳ ಪೈಕಿ ನ್ಯೂಜಿಲೆಂಡ್ ವಿರುದ್ಧ ನಡೆದ WTC ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಸೋಲು ಭಾರತೀಯರಿಗೆ ಭಾರಿ ಆಘಾತವನ್ನುಂಟು ಮಾಡಿತ್ತು.
2021ರ ಆರಂಭದಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಆದಾಗ್ಯೂ, ಗಬ್ಬಾ ಮೈದಾನದಲ್ಲಿ ಐತಿಹಾಸಿಕ ನಾಲ್ಕನೇ ಟೆಸ್ಟ್ ಗೆಲುವು ಸಾಧಿಸಿತ್ತು. ಕೊಹ್ಲಿ ಅನುಪಸ್ಥಿತಿಯಲ್ಲಿ, ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಆಸೀಸ್ ನೆಲದಲ್ಲಿ ನಾಲ್ಕು ಟೆಸ್ಟ್ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.
ಫೆಬ್ರವರಿಯಲ್ಲಿ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 3-1 ಅಂತರದಲ್ಲಿ ಗೆದ್ದುಕೊಂಡಿತ್ತು.
ಜೂನ್‌ನಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ಡಬ್ಲ್ಯುಟಿಸಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಕಿವೀಸ್ ತನ್ನ ಮೊದಲ WTC ಪ್ರಶಸ್ತಿಯನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು.
ಡಬ್ಲ್ಯುಟಿಸಿ ಬಳಿಕ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಿತ್ತು. ಆದರೆ, ನಾಲ್ಕು ಟೆಸ್ಟ್‌ಗಳಲ್ಲಿ ಎರಡನ್ನು ಗೆದ್ದಿರುವ ಟೀಂ ಇಂಡಿಯಾ ಇನ್ನೂ ಮುನ್ನಡೆಯಲ್ಲಿದೆ. ಕೊರೊನಾದಿಂದಾಗಿ ಸರಣಿಯನ್ನು ಮುಂದೂಡಲಾಗಿದೆ. ಮುಂದಿನ ವರ್ಷ ಕೊನೆಯ ಪಂದ್ಯ ನಡೆಯಲಿದೆ.
ನವೆಂಬರ್ ನಲ್ಲಿ ನ್ಯೂಜಿಲೆಂಡ್ ಭಾರತ ಪ್ರವಾಸ ಕೈಗೊಂಡಿದ್ದು, ಭಾರತ 1-0 ಯಿಂದ ಸರಣಿಯನ್ನು ವಶಪಡಿಸಿಕೊಂಡಿದೆ.
ಈಗ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಸೆಂಚುರಿಯನ್‌ನಲ್ಲಿ ನಡೆದ ಟೆಸ್ಟ್ ಪಂದ್ಯವನ್ನು 113 ರನ್‌ಗಳಿಂದ ಗೆದ್ದು ಮೂರು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಿದ ಟೀಂ ಇಂಡಿಯಾ ಗೆಲುವಿನೊಂದಿಗೆ ವರ್ಷವನ್ನು ಅಂತ್ಯಗೊಳಿಸಿದೆ.