ಇಂದಿನಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭ Saaksha Tv
ಬೆಂಗಳೂರು: ಇಂದಿನಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸೋಮವಾರ ಕಾಲೇಜುಗಳ ಆರಂಭ ವಿಚಾರ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ರೇಸ್ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆಸಿದ್ದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಇಂದಿನಿಂದ ಪಿಯು ಮತ್ತು ಡಿಗ್ರಿ ಕಾಲೇಜ್ ಗಳು ಓಪನ್ ಆಗಲಿವೆ ಎಂದರು.
ಕೋರ್ಟ್ ಸೂಚನೆಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳುತ್ತೆ ಎಂದು ಹೇಳಿದರು.
ಒಟ್ಟಿನಲ್ಲಿ ಸೋಮವಾರ ಪ್ರೌಢಶಾಲಾ ತರಗತಿಯ ಆರಂಭವಾಗಿದ್ದು, ಇಂದಿನಿಂದ ಪಿಯು ಮತ್ತು ಡಿಗ್ರಿ ಕಾಲೇಜು ಆರಂಭವಾಗಿವೆ. ಇನ್ನೂ ಸಭೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.