ಮೈಸೂರು: ವಿಶ್ವ ಪ್ರಸಿದ್ಧ ನಾಡಹಬ್ಬ ದಸರಾಗೆ ನಾಳೆಯಿಂದ ಚಾಲನೆ ಸಿಗಲಿದೆ.
ನಾಳೆ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ನಾಡ ಅಧಿದೇವತೆ ಸನ್ನಿಧಿಯಲ್ಲಿ ದಸರೆಗೆ ಚಾಲನೆ ಸಿಗಲಿದೆ. ದಸರಾ ಉದ್ಘಾಟಕ ನಾದಬ್ರಹ್ಮ ಹಂಸಲೇಖ ಅವರು ನಾಳೆ ಬೆಳಗ್ಗೆ 10.15 ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ಚರಿ ದೇವಿಗೆ ಪೂಜೆ ಸಲ್ಲಿಸಿ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಾರಂಪಾರಿಕ ಮೈಸೂರು ನವವಧುವಿನಂತೆ ಶೃಂಗಾರಗೊಂಡಿದೆ.
ಹಂಸಲೇಖ ಅವರು ಈಗಾಗಲೇ ಮೈಸೂರು ಜಿಲ್ಲೆಗೆ ಆಗಮಿಸಿದ್ದು, ಸುತ್ತೂರು ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ನಾಳೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸೇರಿದಂತೆ ಸಚಿವರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.