ನವೆಂಬರ್ 5 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ
ಬೆಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆ, ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗಲಿರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯ ಬಿಜೆಪಿ ಮುಂದಾಗಿದೆ.
ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ಮುಗಿಯುತ್ತಿದ್ದಂತೆ ಸಂಘಟನಾತ್ಮಕ ಚಟುವಟಿಕೆಗಳತ್ತ ಗಮನ ಹರಿಸಲು ರಾಜ್ಯ ಕೇಸರಿ ಮುಂದಾಗಿದೆ.
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮುಗಿಯುತ್ತಿದ್ದಂತೆ ಪಕ್ಷ ಬಲವರ್ಧನೆ ಕುರಿತು ಮಹತ್ವದ ಚರ್ಚೆ ನಡೆಸಲು ನವೆಂಬರ್ 5 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ.
ಮಂಗಳೂರಿನಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ.
ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಪಕ್ಷ ಸಂಘಟನೆ ಸಂಬಂಧ ಮಹತ್ವದ ಚರ್ಚೆ ನಡೆಯಲಿದೆ.
ಕಾರ್ಯಕಾರಿಣಿ ಸಭೆ ನಂತರ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ವೇಳೆ ಪಕ್ಷದ ಆಂತರಿಕ ಸಮಸ್ಯೆ, ಸರ್ಕಾರ, ಪಕ್ಷದ ನಡುವೆ ಅಂತರ ಇತ್ಯಾದಿಗಳ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಇದನ್ನೂ ಓದಿ : ಯಾರ ಪಾಲಾಗುತ್ತೆ ಕುಂಚಿಟಿಗರ ಕೋಟೆ ಶಿರಾ..?
ಇನ್ನು ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರದ ಅಬ್ಬರ ನಿಂತಿದೆ. ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಆರೋಪ, ಪ್ರತ್ಯಾರೋಪ, ರೋಡ್‍ಶೋಗಳ ಸದ್ದು ಈಗಿಲ್ಲ.
ಆದರೆ, ಇಂದು ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆ ನಡೆಸಲಿದ್ದಾರೆ. ನಾಳೆ ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಕೊರೊನಾದಿಂದ ಸತ್ಯಾನಾರಾಯಣ ಅವರ ಅಕಾಲಿತ ಸಾವಿನಿಂದ ತೆರವಾಗಿರುವ ಶಿರಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ.
ಇದನ್ನೂ ಓದಿ : `ಕಾಮಿಡಿ ಆಕ್ಟರ್ ಕಟೀಲ್’ಗೆ ಸಿದ್ದರಾಮಯ್ಯ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ
ಅದೇ ರೀತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿರುವ ಆರ್.ಆರ್ ನಗರದಲ್ಲಿ ನಾಳೆ ಚುನಾವಣೆ ನಡೆಯಲಿದೆ.
ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ, ಬಿಜೆಪಿಯ ರಾಜೇಶ್‍ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.
ಆದೇ ರೀತಿ ಆರ್.ಆರ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಜ್ಞಾನಭಾರತಿ, ಲಗ್ಗೆರೆ ವಾರ್ಡ್‍ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel