ದೇಶದಲ್ಲಿಯೇ ರಾಜ್ಯ ಬಿಜೆಪಿ BJP ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ : ಆರ್.ಧ್ರುವನಾರಾಯಣ್
ಮೈಸೂರು : ದೇಶದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ದೇಶದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಚಿವರು, ಶಾಸಕರೇ ಹೇಳ್ತಿದ್ದಾರೆ.
ಹೀಗಾಗಿ, ಇದರಿಂದ ಶಾಸಕರ ನೈತಿಕತೆ ಕುಂದಿದೆ. ಕಾಂಗ್ರೆಸ್ ಸೇರಲು ಆಸಕ್ತಿ ತೋರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ನೊಂದಿರುವ ಹಲವು ಶಾಸಕರು ಆ ಪಕ್ಷಗಳನ್ನು ತೊರೆಯಲಿದ್ದಾರೆ. ಅವರೆಲ್ಲ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದರು.
ಇನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಅವರ ಭ್ರಷ್ಟಾಚಾರದಿಂದ ಬಿಜೆಪಿ ಶಾಸಕರ ನೈತಿಕ ಶಕ್ತಿ ಕುಗ್ಗಿದೆ.
ಕೆಲ ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಯತ್ನಿಸುತ್ತಿದ್ದಾರೆ. ಮೈಸೂರು ಭಾಗದ ಜೆಡಿಎಸ್, ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರ ಹೆಸರುಗಳನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದರು.