ರಾಮನಗರ: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮೂರು ಕ್ಷೇತ್ರಗಳ ವಿಧಾನಸಭಾ ಚುನಾವಣಾ ಫಲಿತಾಂಶ ನ. 23ರಂದು ಪ್ರಕಟವಾಗಲಿದೆ. ಈ ಮಧ್ಯೆ ಸಮೀಕ್ಷೆಗಳು ಹೊರ ಬೀಳುತ್ತಿದ್ದು, ಹಿಂದೆ ಗೆದ್ದ ಕ್ಷೇತ್ರಗಳಲ್ಲಿ ಆಯಾ ಪಕ್ಷಗಳೇ ಗೆಲುವು ಸಾಧಿಸಬಹುದು ಎನ್ನಲಾಗುತ್ತಿದೆ.
ತೀವ್ರಕುತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಪಿ-ಮಾರ್ಕ್ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ಹೇಳಿದೆ. ಅಲ್ಲದೇ, ಶಿಗ್ಗಾಂವಿಯಲ್ಲಿ ಬಿಜೆಪಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ
ಪಿ-ಮಾರ್ಕ್ ನಡೆಸಿರುವ ಸಮೀಕ್ಷೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಮುನ್ನಡೆ ಸಾಧಿಸಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಜಯಗಳಿಸಲಿದ್ದಾರೆ ಎಂದು ತಿಳಿದು ಬಂದಿದ್ದು, ಮತದಾರನ ಭವಿಷ್ಯ ಮಾತ್ರ ಇನ್ನೂ ಭದ್ರವಾಗಿದೆ. ನ. 23ರಂದು ಎಲ್ಲರೂ ತಿಳಿಯಲಿದೆ.