State Education : ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ..!!
ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಹೊಸ ಆದೇಶ
5 , 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ
ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ
ಮಕ್ಕಳ ಕಲಿಕಾ ಕೊರತೆ ನೀಗಿಸಲು ನಿರ್ಧಾರ
ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆ
ಬೆಂಗಳೂರು : ಮಕ್ಕಳ ಕಲಿಕಾ ಕೊರತೆ ನೀಗಿಸಲು ಕಲಿಕೆಯಲ್ಲಿ ಚೇತರಿಕೆ ಮೂಡಿಸಲು ಶಿಕ್ಷಣ ಇಲಾಖೆಯು ಮಹತ್ವದ ಆದೇಶವೊಂದನ್ನ ಹೊರಡಿಸಿದೆ..
ಆ ಆದೇಶದಂತೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ (Annual Examination) ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.
ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ಈ ಪರೀಕ್ಷೆ ನಡೆಯಲಿದೆ.
ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆಗಳು ನಡೆಯಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ.
ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಕಲಿಕಾ ಸಾಧನೆ ಯಾವ ರೀತಿ ಇದೆ ಎಂಬುದನ್ನು ಅಳೆಯಲು ಈ ವಾರ್ಷಿಕ ಪರೀಕ್ಷೆ ಮಾಡಲಾಗ್ತಿದೆ.
ಯಾವುದೇ ವಿದ್ಯಾರ್ಥಿಗಳನ್ನ ಈ ಪರೀಕ್ಷೆಯಲ್ಲಿ ಉನಿತ್ತೀರ್ಣಗೊಳಿಸಲಾಗುವುದಿಲ್ಲ.. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯೋ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವ್ಯವಸ್ಥೆಯನ್ನ ಶಿಕ್ಷಣ ಇಲಾಖೆಯು ಮಾಡಿಕೊಳ್ಳಲಿದೆ.
ರೂಪಣಾತ್ಮಕ ಪರೀಕ್ಷೆ ಮತ್ತು ಸಂಕಲನಾತ್ಮಕ ಪರೀಕ್ಷೆ ವಿಧಾನದಲ್ಲಿ ಪರೀಕ್ಷೆ ನಡೆಯಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ ಎಂದು ಇಲಾಖೆಯು ತಿಳಿಸಿದೆ.