ಕೋಲಾರ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಇಂದು ಮಾಲೂರಿನ ಕೊಮ್ಮನಹಳ್ಳಿಯಲ್ಲಿರುವ ಶಾಸಕ ಕೆವೈ ನಂಜೇಗೌಡ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ತಡೆಗಟ್ಟಲು ಸರಿಯಾದ ವ್ಯವಸ್ಥೆ ಮಾಡಿಕೊಂಡಿಲ್ಲ. ಹೆಸರಿಗೆ ವೈರಸ್ ನಿಯಂತ್ರಣವಾಗಿದೆ ಎಂದು ಹೇಳುತ್ತಿದೆ. ಆದರೆ, ಮುನ್ನಚ್ಚರಿಕೆ ಕ್ರಮವಾಗಿ ಸರಿಯಾದ ನಿರ್ಣಯ ಸರ್ಕಾರ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಇನ್ನು ಲಾಕ್ ಡೌನ್ ಹಿನ್ನೆಲೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಟ್ಟಿಲ್ಲ. ವೈದ್ಯ ತಜ್ಞರ ತಂಡವನ್ನು ಸರ್ಕಾರ ಸರಿಯಾಗಿ ಬಳಸಿಕೊಳ್ಳತ್ತಿಲ್ಲ. ಕೊರೊನಾ ಪತ್ತೆ ಹಚ್ಚುವ ಕಿಟ್ ವ್ಯವಸ್ಥೆ ರಾಜ್ಯದಲ್ಲಿ ಕಡಿಮೆ ಇವೆ. ಕ್ವಾರಂಟೈನ್ ನಲ್ಲಿರುವ ಹೆಚ್ಚಿನ ಜನರನ್ನು ತಪಾಸಣೆ ಮಾಡಬೇಕಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








