ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ X ನಲ್ಲಿ ಕಿಡಿಕಾರಿದ್ದು, ಈ ದರಿದ್ರ ಸರ್ಕಾರದಲ್ಲಿ ಒಬ್ಬರು ತಮ್ಮ ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಅದನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇವರ ರಾಜಕೀಯ ಕುಚಕ್ರಗಳಲ್ಲಿ ರೈತರು ದಾರಿ ತಪ್ಪುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿಯುವ ಹಂತಕ್ಕೆ ಬಂದಿದೆ, ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಭತ್ತ ಖರೀದಿ ಕೇಂದ್ರಗಳ ಕುರಿತು ನಿರ್ಲಕ್ಷ್ಯ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.