ಬೆಂಗಳೂರು, ಮೇ 16 : ರಾಜ್ಯ ಸರ್ಕಾರ ಮದುವೆ ಸಮಾರಂಭಕ್ಕೆ 17 ನಿಯಮಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಸರಕಾರ ಸೂಚಿಸಿರುವ ಮಾರ್ಗಸೂಚಿ ಕೆಳಕಂಡಂತೆ ಇದೆ.
1. ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು
2. ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
3. ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳು ಮದುವೆಯಲ್ಲಿ ಭಾಗವಹಿಸುವಂತಿಲ್ಲ.
4. ಕಂಟೈನ್ಮೆಂಟ್ ವಲಯದವರಿಗೆ ಮದುವೆಯಲ್ಲಿ ಭಾಗವಹಿಸುವುದು ನಿರ್ಬಂಧ.
5. ಸೂಕ್ತವಾದ ಸಾರ್ವಜನಿಕ ಸ್ಥಳ ಅಥವಾ ನೈಸರ್ಗಿಕ ವಾತಾವರಣ ಇರುವೆಡೆ ಮದುವೆ ಸಮಾರಂಭ
6. ಮದುವೆಗಳಲ್ಲಿ ಎಸಿ ಬಳಕೆಗೆ ನಿರ್ಬಂಧ.
7. ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿಯಿರುವುದು ಕಡ್ಡಾಯ
8. ಮದುವೆಯಲ್ಲಿ ಭಾಗವಹಿಸುವವರ ಲಿಸ್ಟ್ ವನ್ನು ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ
9. ಮದುವೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು.
10. ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು
11. ಮದುವೆಯಲ್ಲಿ ಭಾಗವಹಿಸುವವರಿಗೆ ಮಾಸ್ಕ್ ಕಡ್ಡಾಯ.
12. ಎಲ್ಲರಿಗೂ ಸ್ಕ್ರೀನಿಂಗ್ ಕಡ್ಡಾಯವಾಗಿ ನಡೆಸಿ, 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.
13. ಪ್ರತಿಯೊಬ್ಬರು ಒಂದು ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
14. ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಇರಬೇಕು.
15. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಂತಿಲ್ಲ.
16. ಮದುವೆ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು
17. ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.








