ಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ artists saaksha tv
ಬೆಂಗಳೂರು : ಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಕಲಾವಿದರ ಮಾಸಶನ ಅರ್ಜಿಯನ್ನು ಮೂರು ತಿಂಗಳಿಗೊಮ್ಮೆ ಇತ್ಯರ್ಥ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲಾವಿದರ ಮಾಸಾಶನ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಲಾವಿದರ ಮಾಸಾಶನ ವಿತರಣೆಯಲ್ಲಿ ಆಗುತ್ತಿರುವಂತ ಸಮಸ್ಯೆ ತನ್ನ ಗಮನಕ್ಕೆ ಬಂದಿದ್ದು, ಶೀಘ್ರವೇ ಪರಿಹಾರದ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಹಿಂದೆ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಿದಂತ ಅರ್ಜಿಗಳನ್ನು ವರ್ಷಕ್ಕೊಮ್ಮೆ ಪರಿಶೀಲನೆ ಬದಲು, 6 ತಿಂಗಳಿಗೊಮ್ಮೆ ಪರಿಶೀಲಿಸಿ, ಮಾಸಾಶನ ನೀಡುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.









