Raichur: ರಾಜ್ಯ ಸರಕಾರ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು : ರೈತರ ಪ್ರತಿಭಟನೆ
1 min read
ರಾಜ್ಯ ಸರಕಾರ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು : ರೈತರ ಪ್ರತಿಭಟನೆ
ರಾಯಚೂರು :ರೈತರಿಗೆ ಮಾರಕವಾದ ಕೃಷಿ ಕಾಯ್ದೆಯನ್ನು ರಾಜ್ಯ ಸರಕಾರ ಹಿಂಪಡೆಯಬೇಕೆಂದು ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹೋರಾಟಗಾರರು ಪ್ರತಿಭಟನೆ ಮಾಡಿದರು.
ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವಾಸ ದ್ರೋಹ ಮಾಡಿದ ವರ್ಷಾಚರಣೆ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಮುಖಂಡರು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವಲ್ಲಿ ದ್ವಂದ್ವ ನಿಲುವು ಪ್ರದರ್ಶಿಸುತ್ತಿವೆ ಅಂತ ಆಕ್ರೋಶ ವ್ಯಕ್ತಪಡಿಸಿದರು.