ತೈಲ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳೇ ಕಾರಣವಂತೆ : ಕೇಂದ್ರ ಸಚಿವರು ಹೇಳಿದ್ದು.. oil price hike
ಕೋಲ್ಕತ್ತಾ : ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಲು ರಾಜ್ಯ ಸರ್ಕಾರಗಳೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅಭಿಪ್ರಾಯ ವ್ಯಕ್ತಡಿಸಿದ್ದಾರೆ.
ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಮಧ್ಯೆ ಪೆಟ್ರೋಲ್ – ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ.
ಆದರೆ ಇದಕ್ಕೆ ಅನೇಕ ರಾಜ್ಯಗಳಿಂದ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಕೊಲ್ಕತ್ತಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸಚಿವರ ಪ್ರಕಾರ, ರಾಜ್ಯ ಸರ್ಕಾರಗಳು ಇಂಧನ ಬೆಲೆಯನ್ನು ಜಿಎಸ್ ಟಿ ವ್ಯಾಪ್ತಿಗೆ ತರಲು ಹಿಂದೇಟು ಹಾಕುತ್ತಿರುವುದೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಂತೆ.
ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್ ಬೆಲೆ ಲೀ.ಗೆ 100 ದಾಟಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದು ಎಂದಿದ್ದಾರೆ.









