ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಲ್ಲಾ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವ ಗುರಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Kariyappa N by Kariyappa N
December 28, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟ ಎದುರಾದರೂ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದು, ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.


ಬೆಂಗಳೂರಿನ ಮಾಗಡಿ ರಸ್ತೆ ಬಳಿ ನಿರ್ಮಾಣವಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ‘ಆರೋಗ್ಯ ಸೌಧ’ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಿದರು. ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರ್ಥಿಕ ದುಸ್ಥಿತಿ ಇದ್ದರೂ ಆರೋಗ್ಯ ಕ್ಷೇತ್ರಕ್ಕೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ 4 ಹೊಸ ವೈದ್ಯಕೀಯ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, ಈ ಪೈಕಿ ಮೂರು ಕಾಲೇಜುಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಕೂಡ ಉದ್ಘಾಟನೆಯಾಗಲಿದೆ ಎಂದರು.
ರಾಜ್ಯದಲ್ಲಿ 18 ವೈದ್ಯಕೀಯ ಕಾಲೇಜುಗಳಿವೆ. ಆದರೆ 9 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇಲ್ಲ. ಅಂತಹ ಕಡೆಗಳಲ್ಲಿ ಪಿಪಿಪಿ ಮಾದರಿ ಅಥವಾ ಬೇರೆ ಮಾದರಿಯಲ್ಲಿ ಹೊಸ ಕಾಲೇಜು ನಿರ್ಮಿಸುವ ಗುರಿ ಇದೆ. ಅದಕ್ಕೆ ಹೊಂದಿಕೊಂಡಂತೆ ಜಿಲ್ಲಾಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕೂಡ ನಿರ್ಮಿಸಲಾಗುವುದು ಎಂದು ತಿಳಿಸಿದರು.

Related posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

February 11, 2026
ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

February 11, 2026


ಕೋವಿಡ್ ಸಮಯದಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ. ಹಲವಾರು ವರ್ಷಗಳಿಂದ ರಾಜ್ಯದ ಆಸ್ಪತ್ರೆಗಳಲ್ಲಿ ಸುಮಾರು ಐದಾರು ಸಾವಿರ ಹಾಸಿಗೆಗಳಿಗೆ ಮಾತ್ರ ಆಕ್ಸಿಜನ್ ಅಳವಡಿಸಲಾಗಿತ್ತು. ಆದರೆ ಕಳೆದ ಕೆಲವೇ ತಿಂಗಳಲ್ಲಿ ಸುಮಾರು 30 ಸಾವಿರ ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ. ಕೊರೊನಾ ಯೋಧರಾದ ವೈದ್ಯರು, ಸಿಬ್ಬಂದಿಗೆ ಸುಮಾರು 125 ಕೋಟಿ ರೂ. ಖರ್ಚು ಮಾಡಿ ಭತ್ಯೆ ನೀಡಲಾಗುತ್ತಿದೆ ಎಂದರು.
ದೇಶದ ಜಿಡಿಪಿಯಲ್ಲಿ ಶೇ.1 ರಿಂದ 1.5 ರಷ್ಟು ಮಾತ್ರ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿತ್ತು. ಇನ್ನು ಮುಂದೆ ಶೇ.2.5 ರಷ್ಟು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಸರ್ಕಾರ ಜಾರಿ ಮಾಡಿದ ಆಯುಷ್ಮಾನ್ ಭಾರತ್ ಯೋಜನೆ ಆರೋಗ್ಯ ಕರ್ನಾಟಕವಾಗಿ ನಮ್ಮಲ್ಲಿ ಜಾರಿಯಾಗಿದ್ದು, ಬಿಪಿಎಲ್ ಜೊತೆಗೆ ಎಪಿಎಲ್ ವರ್ಗಕ್ಕೂ ವಿಮೆ ಲಭ್ಯವಿದೆ ಎಂದರು.
ಆರೋಗ್ಯ ಇಲಾಖೆಯ 53 ಕಚೇರಿಗಳು ಒಂದೇ ಕಡೆ ಸುಲಲಿತವಾಗಿ ಕಾರ್ಯನಿರ್ವಹಿಸಲು ಹೊಸ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡದಲ್ಲಿ ಆಯುಕ್ತಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಲ್ಲವೂ ಈ ಕಟ್ಟಡದಲ್ಲಿ ಕಚೇರಿ ಹೊಂದಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿಎಸ್‍ವೈ ಮೆಚ್ಚುಗೆ
ಸಚಿವ ಡಾ.ಕೆ.ಸುಧಾಕರ್ ಅವರು ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: all districtDr. SudhakarMedical collegesplanningState govenrnament
ShareTweetSendShare
Join us on:

Related Posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

by Shwetha
February 11, 2026
0

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

by Shwetha
February 11, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಲಕ್ಷಾಂತರ ಯುವಕರು ಕಾಯುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ಮಗ್ನರಾಗಿದ್ದಾರೆ ಎಂಬ ಗಂಭೀರ ಆರೋಪ ರಾಜ್ಯ...

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

by Shwetha
February 11, 2026
0

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನಗೆ ಈವರೆಗೆ ಯಾವುದೇ...

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

by Shwetha
February 11, 2026
0

ಭಾರತ ಮತ್ತು ಅಮೆರಿಕ ನಡುವಿನ ಬಹುಚರ್ಚಿತ ವ್ಯಾಪಾರ ಒಪ್ಪಂದ ಇದೀಗ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಪ್ಪಂದದ ಆರಂಭದಲ್ಲಿ ಅಮೆರಿಕದ ಸುಂಕವನ್ನು ಶೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram