ಬೆಂಗಳೂರು : ರಾಜ್ಯದ ಮುಂಗಾರು ಅಧಿವೇಶನ ಸೆಪ್ಟೆಂಬರ್21 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಕೊರೊನಾ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ಮುಂದಿನ ತಿಂಗಳು 21ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ ಗುರುತಿಸುವ ಕಾರ್ಯ ನಡೆಸಲಾಗಿತ್ತು. ಅಂತಿಮವಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.