ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 10 ರಾಜ್ಯ ಸುದ್ದಿಗಳು : ಇತ್ತೀಚಿನ ಪ್ರಮುಖ ಸುದ್ದಿಗಳು

Namratha Rao by Namratha Rao
January 29, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂನ್ 14ರಿಂದ 25ರವರೆಗೆ ಪರೀಕ್ಷೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 14ರಿಂದ 25ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ಇಂತಿದೆ..

14 – ಕನ್ನಡ
16 – ಗಣಿತ
18 – ಇಂಗ್ಲಿಷ್
23 – ಹಿಂದಿ
21 – ವಿಜ್ಞಾನ
25 – ಸಮಾಜ ವಿಜ್ಞಾನ

Related posts

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

December 16, 2025
ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

December 16, 2025

ಬೆಂಗಳೂರು ಅಂತಾರಾಷ್ಟ್ರೀಯ ಏರ್ ಪೋರ್ಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ..!

ಬೆಂಗಳೂರು : 2021 ಏರೋ ಇಂಡಿಯಾ ಏರ್ ಶೋ ಹಿನ್ನೆಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ಈ ಕುರಿತು ಕೆಐಎಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಫೆಬ್ರವರಿ 3 ರಿಂದ 5 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಹೀಗಾಗಿ ಏರ್ ಶೋಗೆ ಬೆಂಬಲಿಸಿ ಪೂರ್ವಾಭ್ಯಾಸ ತಾಲೀಮಿಗೆ ಸಹಕಾರ ನೀಡುವ ಉದ್ದೇಶದಿಂದ ಕೆಐಎಬಿ ವಿಮಾನಗಳ ಹಾರಾಟದಲ್ಲಿ ಬದಲಾವಣೆ ಆಗಲಿದೆ.

ಕಪ್ಪು ಬಣ್ಣಕ್ಕೆ ತಿರುಗಿದ ಫಲ್ಗುಣಿ ನದಿ

ಮಂಗಳೂರು : ಜನರ ಬೇಜವಾಬ್ದಾರಿ, ಸ್ಥಳೀಯ ಆಡಳಿತದ ನಿರ್ಲಕ್ಷ್ಯದ ಪರಿಣಾಮ ಫಲ್ಗುಣಿ ನದಿಯು ಕಲುಷಿತಗೊಂಡಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ. ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು, ಕಾರಮೊಗರು, ಏತಮೊಗರು ಮುಂತಾದ ಕಡೆಗಳಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಇದಲ್ಲದೆ ಫಲ್ಗುಣಿ ನದಿ ತಟದಲ್ಲಿರುವ ಗೋಳಿದಡಿಗುತ್ತಿನ ಮುಹಾಕಾಲೇಶ್ವರ ದೇವರ ಉಜೈನಿ ತೀರ್ಥಬಾವಿಯ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ರಾಸಾಯನಿಕಯುಕ್ತ ನೀರು ಬಂದು ಫಲ್ಗುಣಿ ನದಿಯನ್ನು ಸೇರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರವಲ್ಲ, ಹಳದಿ ಬಣ್ಣದ ನೊರೆ ಕಂಡು ಬರುತ್ತಿದೆ.

ಚಪ್ಪಲಿಯಲ್ಲಿ ಬಡಿದಾಡಿಕೊಂಡ ಬೆಸ್ಕಾಂ ಅಧಿಕಾರಿ-ಸಿಬ್ಬಂದಿ

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಬೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ತಾಲೂಕು ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಮಲವೇಗೌಡ ಹಾಗೂ ಮೀಟರ್ ರೀಡರ್ ಎಂ.ಆರ್.ಮಹಾದೇವಯ್ಯ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಲವೇಗೌಡ ಅವರು ಸಿಬ್ಬಂದಿ ಮಹಾದೇವಯ್ಯಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಂಡಿದ್ದಾರೆ.

ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ

ಬೆಂಗಳೂರು : ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ಹೊರಡಿಸಲಾಗಿದ್ದು, 2020- 21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್ ನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಜನವರಿ 13 ರಿಂದ 26ರ ವರೆಗೆ ಆಹ್ವಾನಿಸಲಾಗಿತ್ತು. ಹಲವಾರು ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿ ಹಾಗೂ ಇತರೆ ಸೂಚನೆಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಅದನ್ನು ಓದಿ ನಂತರ ಆನ್ ಲೈನ್ ಅರ್ಜಿ ಭರ್ತಿ ಮಾಡುವಂತೆ ಇಲಾಖೆ ಸೂಚಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: major news updatesSSLC examsState News
ShareTweetSendShare
Join us on:

Related Posts

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram