ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂನ್ 14ರಿಂದ 25ರವರೆಗೆ ಪರೀಕ್ಷೆ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 14ರಿಂದ 25ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ಇಂತಿದೆ..
14 – ಕನ್ನಡ
16 – ಗಣಿತ
18 – ಇಂಗ್ಲಿಷ್
23 – ಹಿಂದಿ
21 – ವಿಜ್ಞಾನ
25 – ಸಮಾಜ ವಿಜ್ಞಾನ
ಬೆಂಗಳೂರು ಅಂತಾರಾಷ್ಟ್ರೀಯ ಏರ್ ಪೋರ್ಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ..!
ಬೆಂಗಳೂರು : 2021 ಏರೋ ಇಂಡಿಯಾ ಏರ್ ಶೋ ಹಿನ್ನೆಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ಈ ಕುರಿತು ಕೆಐಎಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಫೆಬ್ರವರಿ 3 ರಿಂದ 5 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಹೀಗಾಗಿ ಏರ್ ಶೋಗೆ ಬೆಂಬಲಿಸಿ ಪೂರ್ವಾಭ್ಯಾಸ ತಾಲೀಮಿಗೆ ಸಹಕಾರ ನೀಡುವ ಉದ್ದೇಶದಿಂದ ಕೆಐಎಬಿ ವಿಮಾನಗಳ ಹಾರಾಟದಲ್ಲಿ ಬದಲಾವಣೆ ಆಗಲಿದೆ.
ಕಪ್ಪು ಬಣ್ಣಕ್ಕೆ ತಿರುಗಿದ ಫಲ್ಗುಣಿ ನದಿ
ಮಂಗಳೂರು : ಜನರ ಬೇಜವಾಬ್ದಾರಿ, ಸ್ಥಳೀಯ ಆಡಳಿತದ ನಿರ್ಲಕ್ಷ್ಯದ ಪರಿಣಾಮ ಫಲ್ಗುಣಿ ನದಿಯು ಕಲುಷಿತಗೊಂಡಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ. ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು, ಕಾರಮೊಗರು, ಏತಮೊಗರು ಮುಂತಾದ ಕಡೆಗಳಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಇದಲ್ಲದೆ ಫಲ್ಗುಣಿ ನದಿ ತಟದಲ್ಲಿರುವ ಗೋಳಿದಡಿಗುತ್ತಿನ ಮುಹಾಕಾಲೇಶ್ವರ ದೇವರ ಉಜೈನಿ ತೀರ್ಥಬಾವಿಯ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ರಾಸಾಯನಿಕಯುಕ್ತ ನೀರು ಬಂದು ಫಲ್ಗುಣಿ ನದಿಯನ್ನು ಸೇರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರವಲ್ಲ, ಹಳದಿ ಬಣ್ಣದ ನೊರೆ ಕಂಡು ಬರುತ್ತಿದೆ.
ಚಪ್ಪಲಿಯಲ್ಲಿ ಬಡಿದಾಡಿಕೊಂಡ ಬೆಸ್ಕಾಂ ಅಧಿಕಾರಿ-ಸಿಬ್ಬಂದಿ
ರಾಮನಗರ: ಕ್ಷುಲ್ಲಕ ಕಾರಣಕ್ಕೆ ಬೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ತಾಲೂಕು ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಮಲವೇಗೌಡ ಹಾಗೂ ಮೀಟರ್ ರೀಡರ್ ಎಂ.ಆರ್.ಮಹಾದೇವಯ್ಯ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಲವೇಗೌಡ ಅವರು ಸಿಬ್ಬಂದಿ ಮಹಾದೇವಯ್ಯಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಂಡಿದ್ದಾರೆ.
ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ
ಬೆಂಗಳೂರು : ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ಹೊರಡಿಸಲಾಗಿದ್ದು, 2020- 21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್ ನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಜನವರಿ 13 ರಿಂದ 26ರ ವರೆಗೆ ಆಹ್ವಾನಿಸಲಾಗಿತ್ತು. ಹಲವಾರು ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿ ಹಾಗೂ ಇತರೆ ಸೂಚನೆಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಅದನ್ನು ಓದಿ ನಂತರ ಆನ್ ಲೈನ್ ಅರ್ಜಿ ಭರ್ತಿ ಮಾಡುವಂತೆ ಇಲಾಖೆ ಸೂಚಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel