ರಾಜ್ಯ `ಕಾಂಗ್ರೆಸ್ ಮುಕ್ತ’ವಾಗಲಿದೆ : ಸಿ.ಟಿ.ರವಿ
ಮಂಗಳೂರು : ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಮುಂದೆ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ. ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ,
ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ : ಅಮೆರಿಕಾ ಚುನಾವಣೆ : ಮತಗಳಿಕೆಯಲ್ಲಿ ಚರಿತ್ರೆ ಸೃಷ್ಟಿಸಿದ ಬಿಡೆನ್
ಇನ್ನು ಮಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ್ದಾರೆ.
ಮಂಗಳೂರಿನ ಸಿವಿ ರಮಣ ಪೈ ಹಾಲ್ ನಲ್ಲಿ ಸಮಾರಂಭ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಸಿಎಂ ಬಿಎಸ್ ವೈ ಮಾತನಾಡಿ, 2014 ರಲ್ಲಿ ಬಿಜೆಪಿ 104 ಸೀಟ್ ಗಳಿಸಿತ್ತು. ದೇಶದ ಇತಿಹಾಸದಲ್ಲಿ ಮೊದಲಬಾರಿಗೆ 18 ಮಂದಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗೆ ಸೇರಿದ್ದರು.
ವಿನಯ್ ಕುಲಕರ್ಣಿ ವಿರುದ್ಧ ಬಿಜೆಪಿ ರಾಜಕೀಯ ಸೇಡು: ಡಿಕೆಶಿ ಕೆಂಡಾಮಂಡಲ..!
18 ಜನರ ಸಹಕಾರದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಎರಡು ವರ್ಷಗಳ ಬಳಿಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










