ಸುವರ್ಣಸೌಧದಲ್ಲಿ ಪ್ರತ್ಯೇಕ ರಾಜ್ಯದ ಕೂಗು north-karnataka saaksha tv
ಬೆಳಗಾವಿ : ಸುವರ್ಣಸೌಧದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ.
ಕಲ್ಯಾಣ ಕರ್ನಾಟಕದ ವಿಚಾರವಾಗಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ್ ಖಂಡ್ರೆ, ರಾಜ್ಯ ಬಿಜೆಪಿ ಸರ್ಕಾರ ಅಭಿವೃದ್ಧಿ ಚರ್ಚೆ ಬಿಟ್ಟು ಜನ ವಿರೋಧಿ ಮತಾಂತರ ಕಾಯ್ದೆ ಜಾರಿ ತರಲು ಹೊರಟಿದ್ದಾರೆ.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಬಗ್ಗೆ ಪ್ರಶ್ನೆ ಕೇಳಿದರೆ ಚಕಾರ ಎತ್ತಲ್ಲ.
ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಈಶ್ವರ್ ಖಂಡ್ರೆ, ಆಡಳಿತ ಪಕ್ಷದವರು ಕಾನೂನಾತ್ಮಕವಾಗಿ ಅಭಿವೃದ್ಧಿ ಮಂಡಳಿ ರಚನೆ ಮಾಡದೇ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕವನ್ನ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.









