ಪ್ರವಾದಿ ಕುರಿತ ಹೇಳಿಕೆ – ರಾಂಚಿ, ಯೂಪಿಯಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ನೀಡಿದ್ದ ಹೇಳಿಕೆಯನ್ನ ಖಂಡಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟಟನೆ ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.
ಪೊಲೀಸರೊಂದಿಗೆ ಘರ್ಷಣೆ ವೇಳೆ ಗಾಯಗೊಂಡಿದ್ದ ಪ್ರತಿಭಟನಾಕಾರರನ್ನ ಆಸ್ಪತ್ರೆಗೆ ಕರೆತರಲಾಗಿದ್ದು, ಈ ಪೈಕಿ ಇಬ್ಬರು ಮೇತಪಟ್ಟಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಉತ್ತರ ಪ್ರದೇಶದ ನಾಲ್ಕು ನಗರಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಭುಗಿಲೆದ್ದವು. ಪ್ರಯಾಗ್‌ರಾಜ್‌ನಲ್ಲಿ ಕೆಲವು ದ್ವಿಚಕ್ರವಾಹನಗಳು ಮತ್ತು ಗಾಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಜನಸಮೂಹವನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಯೋಗ ಮಾಡಿದ್ದಾರೆ. ಆ ಬಳಿಕ ಪೊಲೀಸರು ಶಾಂತಿಯನ್ನು ಪುನಃಸ್ಥಾಪಿಸಲಾಯಿತು.
ಪ್ರಯಾಗ್‌ರಾಜ್ ಮತ್ತು ಸಹರಾನ್‌ಪುರದಲ್ಲಿ ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಿದರು. ರಾಜ್ಯದ ಆರು ಜಿಲ್ಲೆಗಳ 130ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ 9.45ರವರೆಗೆ ರಾಜ್ಯದ ಆರು ಜಿಲ್ಲೆಗಳಿಂದ 136 ಪ್ರತಿಭಟನಾ ನಿರತ ಕಿಡಿಗೇಡಿಗಳನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.