ರಾಜ್ಯಗಳು ಕಡಿಮೆ ಪ್ರಮಾಣದಲ್ಲಿರುವ ಸಮುದಾಯಗಳಿಗೆ ಅಲ್ಪಸಂಖ್ಯಾತರೆಂದು ಘೋಷಿಸಬಹುದು : ಕೇಂದ್ರ ಸರಕಾರ
ನವದೆಹಲಿ: ಹಲವು ರಾಜ್ಯದಲ್ಲಿ ಹಿಂದುಗಳು ಸೇರಿದಂತೆ ಕಡಿಮೆ ಪ್ರಮಾಣದಲ್ಲಿ ಅನೇಕ ಸಮುದಾಯಗಳಿದ್ದು, ಅವುಗಳನ್ನು ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಅಧಿಕಾರವಿದೆ ಎಂದು ಕೇಂದ್ರ ಸರಕಾರ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ್ದ ಅಫಿಡೆವಿಟ್ನಲ್ಲಿ ತಿಳಿಸಿದೆ.
ಈ ಕುರಿತಾಗಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ನಲ್ಲಿ ಅಲ್ಪಸಂಖ್ಯಾತರಾಗಿರುವ ಜುದಾಯಿಸಂ, ಬಹಾಯಿಸಂ ಸಮುದಾಯವನ್ನು ಹಿಂದೂ ಧರ್ಮದ ಅನುಯಾಯಿಗಳು ಎಂದು ಘೋಷಿಸುವಂತೆ ಕೇಂದ್ರ ಸರಾಕರಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಉತ್ತರಿಸಿದ ಕೇಂದ್ರ ಸರಕಾರ 992 ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಅಡಿ ಭಾಷಾವಾರು ಅಥವಾ ಧಾರ್ಮಿಕ ಸಮುದಾಯಗಳನ್ನು ‘ಅಲ್ಪಸಂಖ್ಯಾತರು’ ಎಂದು ಘೋಷಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ, ಈ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳುವುದಿಲ್ಲ. ರಾಜ್ಯ ಸರ್ಕಾರಗಳು ಈ ರಾಜ್ಯದೊಳಗೆ ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ‘ಅಲ್ಪಸಂಖ್ಯಾತ ಸಮುದಾಯ’ ಎಂದು ಘೋಷಿಸಬಹುದು ಎಂದು ಸುಪ್ರಿಂ ಕೋರ್ಟ್ ಗೆ ತಿಳಿಸಿದೆ.
ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರಗಳು ಸದರಿ ರಾಜ್ಯದಲ್ಲಿ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದು ಮತ್ತು ನಿರ್ವಹಿಸಬಹುದು. ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿರ್ಧರಿಸಬೇಕು ಎಂದು ಅಫಿಡವಿಟ್ ಹೇಳಿದೆ.