ಸತ್ಯಹರಿಶ್ಚಂದ್ರ ಪ್ರತಿಮೆಗೆ ಕಿಡಿಗೇಡಿಗಳಿಂದ ಹಾನಿ Sathya Harishchandra saaksha tv
ಮಂಡ್ಯ : ಜಿಲ್ಲೆಯ ಮದ್ದೂರು ಪಟ್ಟಣದ ಸ್ಮಶಾನದಲ್ಲಿದ್ದ ಸತ್ಯಹರಿಶ್ಚಂದ್ರ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಮದ್ದೂರು ಪಟ್ಟಣದ 23ನೇ ವಾರ್ಡ್ ನಲ್ಲಿರು ಸ್ಮಶಾನದಲ್ಲಿ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು.
ಈ ಸ್ಮಶಾನವನ್ನು ಉದ್ಯಾನವನದ ರೀತಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಮುಖ್ಯದ್ವಾರದಲ್ಲಿ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು.
ಆದ್ರೆ ಕಳೆದ ಮುಖ್ಯ ದ್ವಾರ ದಲ್ಲಿದ್ದ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.









