ಇಂಡಿಯಾ ಗೇಟ್ ಬಳಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪನೆ – ಮೋದಿ.
ರಾಷ್ಟ್ರವು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಗ್ರಾನೈಟ್ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾಗುತ್ತಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರುತ್ತದೆ. ನೇತಾಜಿಯವರ ಜನ್ಮದಿನವಾದ ಜನವರಿ 23 ರಂದು ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.
ಇಂಡಿಯಾ ಗೇಟ್ ಬಳಿ ಭಾರತದ ಹುತಾತ್ಮರ ಸ್ಮರಣಾರ್ಥ ಅಮರ್ ಜವಾನ್ ಜ್ಯೋತಿ ಬೆಳಗುವ ಭವ್ಯ ಆವರಣದ ಅಡಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ಇಲ್ಲಿನ ಅಮರ್ ಜವಾನ್ ಜ್ಯೋತಿ ವಿಲೀನಗೊಳ್ಳುವ ಕಾರಣ 50 ವರ್ಷಗಳ ಬಳಿಕ ಜ್ಯೋತಿಯನ್ನ ಸ್ಥಳಾಂತರಿಸಲಾಗುತ್ತಿದೆ.
ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ
‘ಗರುಡ ಗಮನ ವೃಷಭ ವಾಹನ’ಕ್ಕೆ ‘ಬಲ್ಲಾಳ ದೇವ’ನ ‘ಹೃದಯ’ದ ಮೆಚ್ಚುಗೆ