ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ 2 ದಿನ ಭಾರಿ ಮಳೆ heavy rain saaksha tv
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಬೀಳುತ್ತಿದ್ದು, ಹಲವು ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ.
ಸದ್ಯ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ವರ್ಷಧಾರೆ ಆಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದ ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವರುಣನ ಸಿಂಚನವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ನಾಳೆಯವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.