ಚಿಕ್ಕಮಗಳೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಯುವತಿ ಅಮೂಲ್ಯ ಮನೆ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಅಮೂಲ್ಯ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಕಿಗಳು ಧ್ವಂಸಗೊಂಡಿವೆ ಎಂದು ಹೇಳಲಾಗುತ್ತಿದೆ.
ಘಟನೆ ಬಳಿಕ ಅಧಿಕಾರಿಗಳು ಅಮೂಲ್ಯ ಅವರ ಮನೆಗೆ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆಂದು ತಿಳಿದುಬಂದಿದೆ. ಈ ನಡುವೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಯುವತಿ ಅಮೂಲ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಸದ್ಯ ಅಮೂಲ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ಕೂಡಲೇ ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ರಾಜ್ಯದ ರೈತರಿಗೆ ಗುಡ್ ನ್ಯೂಸ್:’ಮೊಬೈಲ್’ಮೂಲಕವೇ ‘ಜಮೀನಿನ ಪೋಡಿ ನಕ್ಷೆ’ Download ಮಾಡಿ
ರಾಜ್ಯದ ರೈತರಿಗೆ ಗುಡ್ ನ್ಯೂಸ್:'ಮೊಬೈಲ್'ಮೂಲಕವೇ 'ಜಮೀನಿನ ಪೋಡಿ ನಕ್ಷೆ' Download ಮಾಡಿಕೊಳ್ಳಿ ಹೇಗೆ ತಿಳಿಯೋಣ ಬನ್ನಿ.. ಪೋಡಿ ಎಂದರೇನು? “ಪೋಡಿ” ಎಂಬ ಪದವು ಬಹು ಮಾಲೀಕರ ನಡುವೆ...