CAA ಕಾಯ್ದೆ ಸಂಬಂಧ ಹಿಂಸಾಚಾರಕ್ಕೆ ಬಲಿಯಾಗಿರುವ ದೆಹಲಿ ಬಗ್ಗೆ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿದೆ. ಹೊತ್ತಿ ಉರಿಯುತ್ತಿರುವ ದೆಹಲಿ ಹಿಂಸಾಚಾರವನ್ನು ಹತೋಟಿಗೆ ತರುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆ, ಹಿಂಸಾಚಾರ ದೃಶ್ಯಗಳನ್ನು ಪ್ರಸಾರ ಮಾಡದಂತೆ ಸುದ್ದಿ ಮಾದ್ಯಮಗಳಿಗೆ ಮನವಿ ಮಾಡಿಕೊಂಡದೆ. ಅಲ್ಲದೆ ಈ ಈಗಾಗಲೇ ನೂರಾರು ಕೋಟಿ ಆಸ್ತಿ ನಷ್ಟವಾಗಿದ್ದು, ೨೦ ಕ್ಕೂ ಹೆಚ್ಚು ಜನ ಹಿಂಸಾಚಾರಕ್ಕೆ ಬಲಿಯಾಗಿ, ನೂರಾರು ಜನ ಆಸ್ಪತ್ರೆ ಸೇರಿದ್ದಾರೆ. ಟಿವಿಗಳಲ್ಲಿ ದೃಶ್ಯಗಳ ಪ್ರಸಾರವಾದಂತೆಲ್ಲಾ ಹಿಂಸಾಚಾರ ಹೆಚ್ಚಾಗುವ ಭೀತಿಯಲ್ಲಿರುವ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇನ್ನೂ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ಆ್ಯಕ್ಟ್ ೧೯೯೫ ಅಡಿಯಲ್ಲಿ ಸುದ್ದಿ ಮಾದ್ಯಮಗಳು ಕಾರ್ಯನಿರ್ವಹಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಹೆದರಿಸಬೇಕಾಗುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚನೆ ನೀಡಿದೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








