ನಮ್ಮ ನೆಲದಲ್ಲಿ ಕನ್ನಡ ಭಾಷೆಯೇ ಮೊದಲು : ಹಿಂದಿ ದಿವಸ್ ಗೆ ಹೆಚ್‍ಡಿಕೆ ವಿರೋಧ

1 min read
KS Eshwarappa

ನಮ್ಮ ನೆಲದಲ್ಲಿ ಕನ್ನಡ ಭಾಷೆಯೇ ಮೊದಲು : ಹಿಂದಿ ದಿವಸ್ ಗೆ ಹೆಚ್‍ಡಿಕೆ ವಿರೋಧ

ಬೆಂಗಳೂರು : ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಿಂದಿ ದಿವಸ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕøತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ. ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ‘ಇಂದ್ರ ವೈಭೋಗ’ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು.

StopHindiImposition saaksha tv

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd