ಕಾಫಿನಾಡಲ್ಲಿ ಬಿರುಗಾಳಿ ಸಹಿತ ಮಳೆ : ಜನಜೀವನ ಅಸ್ತವ್ಯಸ್ತ chikkamagalore
ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಿರುಗಾಳಿ ಸಹಿತಿ ಮಳೆಯಾಗುತ್ತಿದೆ.
ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಅಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಭಾರಿ ಮಳೆಯಿಂದಾಗಿ ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪ ಗುಡ್ಡ ಕುಸಿತ ಉಂಟಾಗಿದೆ.
ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ಭದ್ರ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.
ಕಳಸದಿಂದ ಹೊರನಾಡು ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗುವ ಹಂತಕ್ಕೆ ಬಂದಿದೆ.









