ನಡುರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 2000, 500 ರೂ.ನ ನಕಲಿ ನೋಟುಗಳನ್ನು ರಸ್ತೆಯಲ್ಲಿ ಎಸೆದು ಹೋಗಿರುವ ಘಟನೆ ಉಡುಪಿಯ ವಾದಿರಾಜ ರಸ್ತೆಯಲ್ಲಿ ನಡೆದಿದೆ.
ಈ ಬಗ್ಗೆ ಸ್ಥಳೀಯರು ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ
ಇಂದು ಬೆಳಗ್ಗೆ ರಸ್ತೆಯಲ್ಲಿ ನಡೆದುಕೊಂಡು ಹೋದ ಅಪರಿಚಿತ ತನ್ನಲ್ಲಿದ್ದ 2000, 500 ರೂ. ಮುಖಬೆಲೆಯ ಸುಮಾರು ಮೂವತ್ತು ನಕಲಿ ನೋಟುಗಳನ್ನು ಎಸೆದು ಹೋಗಿದ್ದಾನೆ. ಇದನ್ನು ಗಮನಿಸಿದ ಕೆಲವರು ಆತನನ್ನು ಹಿಂಬಾಲಿಸಿದ್ದಾರೆ. ಆದರೆ ಆತ ಓಣಿಯೊಂದರಲ್ಲಿ ಓಡಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ಇನ್ನೂ ಕೆಲವರು ಈ ನೋಟುಗಳನ್ನು ಹೆಕ್ಕಿ ಪೊಲೀಸರಿಗೆ ನೀಡಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.








