ರಾಜ್ಯ ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ : ನಾಯಿಗಳ ದಾಳಿಗೆ 10 ಮಂದಿ ಗಂಭೀರ ಗಾಯ..!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗ್ತಾಯಿದೆ. ಬೀದಿನಾಯಿಗಳಿಂದ ಈಗಾಗಲೇ ಅನೇಕರು ಗಾಯಗೊಂಡಿದ್ದು, ಅನೇಕರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆಗಳು ನಡೆದುಹೋಗಿವೆ. ಇಷ್ಟಾದ್ರು ಬಿಬಿಎಂಪಿ ಮಾತ್ರ ಸೂಕ್ತ ಕ್ರಮಗಳನ್ನ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಮತ್ತೊಮ್ಮೆ ಬೀದಿ ನಾಯಿಗಳು 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹೌದು ಕೋರಮಂಗಲದ 4ನೇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







