ಅನಧಿಕೃತ ಪ್ರಾಣಿವಧೆಗೆ ಬ್ರೇಕ್ ಹಾಕುವ ಸಲುವಾಗಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಾತ್ರೆ, ಬಕ್ರೀದ್, ಹಬ್ಬ ಹರದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಕಟನೆಯೊಂದನ್ನು ಹೊರಡಿಸಿರುವ ಪಾಲಿಕೆ ಕೆಳಕಂಡ ಸ್ಥಳಗಳಲ್ಲಿ ಪ್ರಾಣಿವಧೆಗೆ ನಿರ್ಬಂಧ ಹೇರಿದೆ.
1. ರಸ್ತೆಗಳು , ಪಾದಚಾರಿ ಮಾರ್ಗಗಳು.
2. ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ಗಳ ಒಳ ಮತ್ತು ಹೊರ ಆವರಣಗಳು.
3. ಶಾಲೆ, ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ.
4. ದೇವಸ್ಥಾನಗಳ / ಮಸೀದಿಗಳ ಹಾಗೂ ಇತರೆ ಧಾರ್ಮಿಕ ಸ್ಥಳದ ಆವರಣಗಳಲ್ಲಿ.
5. ಉದ್ಯಾನವನಗಳ ಒಳಗೆ ಮತ್ತು ಹೊರಗೆ
6. ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ.
ಇನ್ನೂ 1976 ರ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ ಪ್ರಕಾರ ಪ್ರಾಣಿವಧೆ ಮಾಡುವುದರ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ. ಅಲ್ಲದೇ ಕರ್ನಾಟಕ ರಾಜ್ಯ ಪ್ರಾಣಿವಧಾ ನಿಯಂತ್ರಣ ನಿಯಮ 1959 ರ ಸೆಕ್ಷನ್ 3 ರ ಪ್ರಕಾರ ಹಾಗೂ ತಿದ್ದುಪಡಿ ಕಾಯ್ದೆ 1975 ರ ಪ್ರಕಾರ ಅನಧಿಕೃತ ಪ್ರಾಣಿವಧೆ ಶಿಕ್ಷಾರ್ಹ ಅಪರಾಧವಾಗಿದ್ದು , ಅಂಥಹವರಿಗೆ 6 ತಿಂಗಳ ಸಜೆ ಅಥವಾ ರೂ. 1000/-ಗಳ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ಉಲ್ಲೇಖವಾಗಿದೆ. ಜೊತೆಗೆ ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ, ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಕೋರಿದೆ. 
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








