ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖಾಸಗಿ ಆಸ್ಪತ್ರೆಗಳು ಸಕಾ೯ರದ ಜತೆ ಸಹಕರಿಸುವಂತೆ ವಿನಂತಿ –  ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್‌ ಕೇಸ್‌ : ಸಚಿವ ಸುಧಾಕರ್‌

admin by admin
July 5, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026
hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026

ಖಾಸಗಿ ಆಸ್ಪತ್ರೆಗಳು ಸಕಾ೯ರದ ಜತೆ ಸಹಕರಿಸುವಂತೆ ವಿನಂತಿ –  ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್‌ ಕೇಸ್‌ : ಸಚಿವ ಸುಧಾಕರ್‌
ಬೆಂಗಳೂರು : ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.
ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವಿಧಾನಸೌಧಕ್ಕೆ ಮರಳಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಭಾನುವಾರ ಈ ವಿವರ ನೀಡಿದರು.
ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳ ಜತೆ ಸಕಾ೯ರ ಮಾತುಕತೆ ನಡೆಸಿದೆ. ಸಭೆಯಲ್ಲಿ ತಮ್ಮಲ್ಲಿರುವ ಅಧ೯ದಷ್ಟು ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. ತಕ್ಷಣದಿಂದಲೇ ೨,೭೩೪ ಹಾಸಿಗೆ ನೀಡುವುದಾಗಿ ಅವರು ಮಾತುಕೊಟ್ಟಿದ್ದರು. ಇದುವರೆಗೆ ನೀಡಿರುವುದು ಕೇವಲ ೧೧೬ ಮಾತ್ರ. ನಮಗೆ ಕೊಟ್ಟಿರುವ ಮಾಹಿತಿ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ನೇರವಾಗಿ ಬಂದು ದಾಖಲಾಗಿರುವ ಕೋವಿಡ್‌ ರೋಗಿಗಳ ಸಂಖ್ಯೆ ೮೯೮ ಎಂದು ಗೊತ್ತಾಗಿದೆ. ಮಾತು ಕೊಟ್ಟಂತೆ ಸಕಾ೯ರಕ್ಕೆ ನೀಡಬೇಕಿರುವ ಹಾಸಿಗೆಗಳನ್ನು ಅವರು ಆದಷ್ಟು ಬೇಗ ಹಸ್ತಾಂತರಿಸಬೇಕು. ಇದರ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿಯೇ ಮುಖ್ಯಮಂತ್ರಿಯವರು ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್‌ ಅವರನ್ನು ನೇಮಕ ಮಾಡಿದ್ದಾರೆ. ಸೋಮವಾರದಿಂದಲೇ ಅವರು ಕಾಯೋ೯ನ್ಮುಖರಾಗಲಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ, ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕಾಗುತ್ತದೆ. ಇದು ಆರೋಗ್ಯ ತುತು೯ ಪರಿಸ್ಥಿತಿ ಸಂದಭ೯ ಆಗಿರುವುದರಿಂದ ಈ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ದೂರು ಇದ್ದರೆ ಕರೆ ಮಾಡಿ : ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ಟೆಸ್ಟ್‌ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ ೧೯೧೨ ನಂಬರಿಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ ೨೪ ತಾಸು ಕಾಯ೯ ನಿವ೯ಹಿಸುವ ಕಾಲ್‌ ಸೆಂಟರ್‌ ಆರಂಭಿಸಲಾಗಿದೆ. ಆರಂಭದಲ್ಲಿ ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆ ಬರಬಹುದು, ಕ್ರಮೇಣ ಎಲ್ಲವೂ ಸರಿಯಾಗಲಿದೆ ಎಂದರು.
ನಗರದಲ್ಲಿ ಅಗತ್ಯ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ ೧೦೮ ಸೇವೆಯಡಿ ಕಾಯ೯ ನಿವ೯ಹಿಸುತ್ತಿರುವ ಆಂಬ್ಯುಲೆನ್ಸ್‌ಗಳ ಹೊರತಾಗಿ ನಗರದ ಪ್ರತಿ ವಾಡಿ೯ಗೆ ಎರಡುರಂತೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತದೆ. ಯಾರಿಗೆ ಆಗಲಿ ಅಗತ್ಯವಿದ್ದಲ್ಲಿ ೧೦೮ ಸಂಖ್ಯೆಗೆ ಕರೆ ಮಾಡಿ ಸೌಲಭ್ಯ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಹೆಚ್ಚು ವಸೂಲಿ ಮಾಡುವಂತಿಲ್ಲ : ಕೆಲ ಮಾಧ್ಯಮಗಳಲ್ಲಿ ಕೋವಿಡ್‌ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸಕಾ೯ರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಟೆಸ್ಟ್‌ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸಕಾ೯ರದವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ನಮ್ಮಿಂದ ಕಳುಹಿಸದ ರೋಗಿಗಳಿಗೆ ೨,೨೦೦ ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನಮ್ಮಲ್ಲಿ ಒಟ್ಟು ೮೦ ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ ೨೪ ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ ೩೦ ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್‌ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್‌ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್‌ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಆತಂಕ ಬೇಡ : ನಮ್ಮಲ್ಲಿ ಕೋವಿಡ್‌ ಕೇರ್‌ , ಸಕಾ೯ರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ೮೧೯ ಹಾಸಿಗೆಗಳ ಪೈಕಿ ೧೫೨ ಖಾಲಿಯಿವೆ, ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ೧೮೯೯ ಹಾಸಿಗೆ ಪೈಕಿ ೭೭೯ ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ ೬೧೧ರಲ್ಲಿ ಇನ್ನೂ ೧೦೫ ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ ೨೭೩೪ ಹಾಸಿಗೆ ನೀಡಬೇಕಿದ್ದು ಇದುವರೆಗೆ ೧೧೬ ಮಾತ್ರ ನೀಡಿದ್ದಾರೆ. ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.
ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾನೂನು ಜಾರಿಗೆ ಚಿಂತನೆ
ಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ೬೦ ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ. ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ಸಚಿವ ಸುಧಾಕರ್‌ ತಿಳಿಸಿದರು.

Tags: COVID-19Dr. Sudhakarkarnataka govt
ShareTweetSendShare
Join us on:

Related Posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram