ಲಾಠಿ ಬಳಸದೇ ಕಟ್ಟುನಿಟ್ಟಿನ ಲಾಕ್ ಡೌನ್
ಹುಬ್ಬಳ್ಳಿ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೊರೊನಾ ಸೋಂಕು ತಡೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು, ಅದನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಿನಿಂದ ಜಾರಿಗೆ ತರಲು ಸೂಚಿಸಲಾಗಿದೆ.
ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಹಾಗೂ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಜೊತೆಗೆ ಲಾಠಿ ಉಪಯೋಗಿಸದೆ ಶಾಂತವಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದೇನೆ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ 24 ಕ್ಕೆ ಕೊನೆಯಾಗಿತ್ತು. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಮತ್ತೆ ಎರಡು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.









