ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೊಮ್ಮೆ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ.
ಅಪ್ಘಾನ್ ನಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪಗಳು ಸಂಭವಿಸುತ್ತಲೇ ಇವೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿದ್ದಾರೆ. ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.
ಪ್ರಬಲ ಭೂಕಂಪನದ ಅನುಭವವಾದ ಕೂಡಲೇ ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದಿದ್ದಾರೆ. ಕಳೆದ ಒಂದು ವಾರದಲ್ಲಿ ಭೂಕಂಪದಿಂದ ಉಂಟಾದ ವಿನಾಶದ ನಂತರ, ಜನರು ಇನ್ನೂ ಭಯದಲ್ಲಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ. ಇಲ್ಲಿಯವರೆಗೆ 4 ಸಾವಿರಕ್ಕೂ ಹೆಚ್ಚು ಜನ ಭೂಕಂಪಕ್ಕೆ ಬಲಿಯಾಗಿದ್ದಾರೆ.