ನವದೆಹಲಿ: ಚೀನಾದಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ದೆಹಲಿಯಲ್ಲಿ ಕೂಡ ಕಂಪಿಸಿದ ಅನುಭವವಾಗಿದೆ.
ಚೀನಾದ ದಕ್ಷಿಣ ಕ್ಸಿನ್ ಜಿಯಾಂಗ್ ನಲ್ಲಿ (Southern part of China’s) ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ (Earthquake) ಸಂಭವಿಸಿದೆ. ಆದರೆ, ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್ ಸಿಆರ್ ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಸೋಮವಾರ ಬೆಳಿಗ್ಗೆ ಈಶಾನ್ಯ ಚೀನಾದ ಗುಡ್ಡಗಾಡು ಹಾಗೂ ಪರ್ವತ ಶ್ರೇಣಿಯಲ್ಲಿ ಭೂಕಂಪ ಸಂಭವಿಸಿದ್ದು, 47 ಜನ ಸಮಾಧಿಯಾಗಿದ್ದರು. ಈಗ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಆತಂಕದಲ್ಲಿದ್ದಾರೆ.








