ಪ್ರಭಲ ಭೂಕಂಪ ಸಂಭವಿಸಿ 300 ಜನ ಸಾವನ್ನಪ್ಪಿರುವ ಘಟನೆ ಮೊರಾಕೊದಲ್ಲಿ (Morocco) ಸಂಭವಿಸಿದೆ. ಅಲ್ಲದೇ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಮರಕೇಶ್‍ನ ನೈಋತ್ಯದ 71 ಕಿಲೋಮೀಟರ್ ದೂರದ 18.5 ಕಿಮೀ ಆಳದಲ್ಲಿದೆ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಕಂಪದ ತೀವ್ರತೆಗೆ ಪುರಾತನ ಕಟ್ಟಡಗಳು ಸೇರಿದಂತೆ ಹಲವಾರು ಕಟ್ಟಡಗಳು ಹಾನಿಯಾಗಿವೆ.
ಭೂಕಂಪದಿಂದಾಗಿ ನಗರದಲ್ಲಿ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ಸ್ಥಗಿತವಾಗಿದೆ. ತಾತ್ಕಾಲಿಕ ನೆಟ್‍ವರ್ಕ್ ವ್ಯವಸ್ಥೆ ಮಾಡಲಾಗಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಯಾವುದೇ ಹಾನಿ ಅಥವಾ ಸಾವು ನೋವುಗಳನ್ನು ಉಂಟುಮಾಡಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.