ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವಾಗಿ ಕಾಂಗ್ರೆಸ್ (Congress) ನಿಂದ ಪ್ರೇರಿತವಾಗಿ ಹೋರಾಟಗಳು ನಡೆಯುತ್ತಿವೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಡಿದ್ದು ಸುಳ್ಳಾಗಬಹುದು. ನೋಡಿದ್ದು ಸುಳ್ಳಾಗಬಹುದು. ನಿಧಾನವಾಗಿ ಯೋಚಿಸಿದಾಗ ಎಲ್ಲವೂ ತಿಳಿಯುತ್ತದೆ ಎಂಬುವುದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನಿಂದ ಪ್ರೇರೇಪಿತರಾಗಿ ಹೋರಾಟ ಮಾಡಬಾರದು ಎಂದು ಹೇಳಿದ್ದಾರೆ.
ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ. ನನಗೂ ಅದು ಗೊತ್ತಿದೆ. ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಜೀವಿತಾವಧಿಯಿಂದ ಇಲ್ಲಿಯವರೆಗೆ ಅವರ ವಿರುದ್ಧವಾಗಿ ನಡೆದುಕೊಂಡ ವಿಷಯವನ್ನು ಸಂಪೂರ್ಣವಾಗಿ ವಿವರಿಸಿದ್ದರಿಂದ ಕಾಂಗ್ರೆಸ್ಸಿಗೆ ಅದು ಮುಜುಗುರವಾಗಿ ಈ ರೀತಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...







