ಲಕ್ನೋ: ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ವಿದ್ಯಾರ್ಥಿ ಕುಸಿದು ಬಿದ್ದು ಐಸಿಯುಗೆ ದಾಖಲಾಗಿರುವ ಘಟನೆಯೊಂದು ನಡೆದಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದೆ. ಮೀರತ್ ನ ಮೋದಿಪುರಂನ ಮಹರ್ಷಿ ದಯಾನಂದ ಇಂಟರ್ ಕಾಲೇಜಿನ ವಿದ್ಯಾರ್ಥಿ ಅಂಶುಲ್ ಕುಮಾರ್ ಶೇ. 93.5 ಅಂಕ ಗಳಿಸಿದ್ದ. ಫಲಿತಾಂಶ ನೋಡಿ ಅಂಶುಲ್ ಖುಷಿಯಿಂದ ಕುಣಿದು ಕುಪ್ಪಳಿಸಿದ್ದಾನೆ. ಇದರ ಬೆನ್ನಲ್ಲಿಯೇ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ.
ಮಗ ಕುಸಿದು ಬಿದ್ದಿದ್ದನ್ನು ಕಂಡು ಕುಟುಂಬಸ್ಥರು ಗಾಬರಿಯಾಗಿದ್ದಾರೆ. ಕೂಡಲೇ ಆತನನ್ನು ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ, ಆತ ಮೇಲೆ ಎದ್ದಿಲ್ಲ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ಆತನನ್ನು ವೈದ್ಯರು ಐಸಿಯುಗೆ ದಾಖಲಿಸ ಚಿಕಿತ್ಸೆ ನೀಡುತ್ತಿದ್ದಾರೆ.
ಅಂಶುಲ್ ತಂದೆ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಐಸಿಯುಗೆ ದಾಖಲಾದ ನಂತರ ವಿದ್ಯಾರ್ಥಿ ಆರೋಗ್ಯ ಸ್ಥಿರಗೊಂಡಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಂಶುಲ್ ಕುಟುಂಬಸ್ಥರು ಹೇಳಿದ್ದಾರೆ. ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್ ಇತ್ತೀಚೆಗೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶ ಪ್ರಕಟಿಸಿದೆ.