ಬೆಂಗಳೂರು: ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ (Student) ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಹತ್ತಿರದ ಕಾಲೇಜಿನಲ್ಲಿ ನಡೆದಿದೆ. ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯು ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದವು. ಈ ಸಂದರ್ಭದಲ್ಲಿ ವಿದ್ಯಾರ್ಥಿ ತಡವಾಗಿ ಬಂದಿದ್ದ. ಈ ವೇಳೆ ಏನಾದರೂ ನಿಂದಿಸಿದ್ದು, ಮನನೊಂದು ಆತ್ಮ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ರಾಹುಲ್ ಮೂಲತಃ ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯವನು ಎನ್ನಲಾಗಿದೆ. ಈತ ಹಾಸ್ಟೇಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.