ಚಿಕ್ಕಮಗಳೂರು: ವಿದ್ಯಾರ್ಥಿನಿ ಹಾಗೂ ಶಾಲ ಬಸ್ ಚಾಲಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಚಾಲಕ ಸಂತೋಷ್ (28) ಹಾಗೂ ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎನ್ನಲಾಗಿದೆ.
ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಳು. ಈ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಸಂತೋಷ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ಪಾಲಕರು, ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ಇಷ್ಟಿದ್ದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ. ನಿನ್ನೆ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನೊಂದಿಗೆ ಕರೆದೊಯ್ದಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪೊಲೀಸರು ಪರಿಶೀಲನೆ ನಡೆಸಿದರು.








