ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು mandya saaksha tv
ಮಂಡ್ಯ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
8 ವರ್ಷದ ಮಧುಸೂದನ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಮಧುಸೂದನ್ ಇಂದು ಎಂದಿನಂತೆ ಮನೆಯಿಂದ ತೆರಳುತ್ತಿದ್ದ,
ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಮಧುಸೂದನ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮಧುಸೂದನ್ ಮೃತಪಟ್ಟಿದ್ದಾನೆ.
ಇತ್ತ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.