ವಿಷ ಸೇವಿಸಿ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಾವು
ಮಂಗಳೂರು : ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
20 ವರ್ಷದ ವಿನ್ಸಿ ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದಳು ಎಂದು ತಿಳಿದುಬಂದಿದೆ.
ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ಗ್ರಾಮದ ವಿನ್ಸಿ ಮಾರ್ಚ್ 14 ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ತಕ್ಷಣ ಆಕೆಯನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಇನ್ನು ವಿನ್ಸಿ ಆತ್ಮಹತ್ಯಗೆ ನಿಖರವಾದ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಇನ್ನು ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.