ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ Bangalore saaksha tv
ಬೆಂಗಳೂರು : ಮಾನಸಿಕ ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ಆರ್ಮಿ ಸ್ಕೂಲ್ ನ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ.
ಇಂದು ಬೆಳಗಿನಜಾವ 5:45ರ ಸುಮಾರಿಗೆ ರಾಹುಲ್ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಹುಲ್ ತಂದೆ ಮಾಜಿ ಹವಾಲ್ದಾರ್ ಆಗಿದ್ದು, ತಂದೆಯ ಪರವಾನಗಿ ಇರುವ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.
ಇನ್ನು ಸದಾಶಿವನಗರ ಠಾಣೆಯ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.