ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಪ್ರವೇಶಕ್ಕೆ ಅನುಮತಿ ಇಲ್ಲ
ಬೆಂಗಳೂರು, ಸೆಪ್ಟೆಂಬರ್19: ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕಂಟೇನ್ಮೆಂಟ್ ವಲಯ ಹೊರತುಪಡಿಸಿ ರಾಜ್ಯದ ಸರ್ಕಾರಿ, ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸಂದೇಹ ಪರಿಹಾರಕ್ಕಾಗಿ ಶಾಲಾ ಕಾಲೇಜುಗಳ ಪ್ರವೇಶಕ್ಕೆ ಅನುಮತಿ ನೀಡಿತ್ತು.
ಆದರೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯಕ್ಕೆ ಬರಲಾಗಿದೆ. ಇದರಿಂದಾಗಿ ಸೆಪ್ಟಂಬರ್ ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಂಶಕರ್ ತಿಳಿಸಿದ್ದಾರೆ.
https://twitter.com/SaakshaTv/status/1307366234602823680?s=19








