ಅಕ್ಟೋಬರ್15 ರವರೆಗೂ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗೆ ಭೇಟಿ ನೀಡಲು ಅನುಮತಿ ಇಲ್ಲ
ಬೆಂಗಳೂರು, ಸೆಪ್ಟೆಂಬರ್30: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್15 ರವರೆಗೂ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಭೇಟಿ ನೀಡಲು ಅನುಮತಿ ನಿರಾಕರಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆ ಹೊರಡಿಸಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಆ.28 ರಂದು ಕೇಂದ್ರ ಸರಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ವಲಯ ಬಿಟ್ಟು 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ಸೆ.21 ರಿಂದ ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿದೆ.
https://twitter.com/SaakshaTv/status/1311322694978121729?s=20
ಆದರೆ, ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಸೆ.19 ರಂದು ಸೂಚಿಸಲಾಗಿತ್ತು.
ಈಗ ಮತ್ತೆ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದ್ದು ಅಕ್ಟೋಬರ್ 15 ರವರೆಗೆ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ಭೇಟಿ ನೀಡಲು ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದೆ.








